Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:52 - ಪರಿಶುದ್ದ ಬೈಬಲ್‌

52 ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಎಗ್ದಮ್ ಡೊಳೆ ಧಾಪುನ್ ಉಗ್ಡುಚ್ಯಾ ಭುತ್ತುರ್ ಮಟ್ಲ್ಯಾ ಬಾಸೆನ್, ಆಕ್ರಿಚ್ಯಾ ಮೊಟ್ಯಾ ಪಂವ್ಯಾಚ್ಯಾ ಅವಾಜಾಕ್ ಹೆ ಘಡ್ತಾ. ಪಂವೊ ವಾಜ್ತಾ ಅನಿ ಮರಲ್ಲಿ ಲೊಕಾ ನಾಸ್ ಹೊವ್ನ್ ಜಾಯ್ನಸಲ್ಲಿ ಹೊವ್ನ್ ಉಟ್ತ್ಯಾತ್ ಅನಿ ಅಮಿ ಸಗ್ಳೆ ಜಾನಾ ನ್ಹವ್ಯಾ ರುಪಾತ್ ಬದಲ್ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:52
24 ತಿಳಿವುಗಳ ಹೋಲಿಕೆ  

ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.


“ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.


ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.


ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.


“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.


ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.


ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.


ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು