1 ಕೊರಿಂಥದವರಿಗೆ 16:10 - ಪರಿಶುದ್ದ ಬೈಬಲ್10 ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಿಮೊತಿ ಯೆಲ್ಯಾರ್‍ಬಿ ತೊ ಕಸ್ಲೆಬಿ ಭಿಂಯೆ ನಸ್ತಾನಾ ತುಮ್ಚ್ಯಾ ವಾಂಗ್ಡಾ ರ್‍ಹಾತಲಿ ಯವಸ್ತಾ ಕರಾ; ಕಶ್ಯಾಕ್ ಮಟ್ಲ್ಯಾರ್ ಮಿಯಾ ಕರ್‍ತಾ ತಸೆಚ್ ತೊಬಿ ಧನಿಯಾಚೆ ಕಾಮ್ ಕರ್‍ತಾ. ಅಧ್ಯಾಯವನ್ನು ನೋಡಿ |
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.