Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:18 - ಪರಿಶುದ್ದ ಬೈಬಲ್‌

18 ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ನಿಮ್ಮನ್ನು ಸಂತೈಸಿದಂತೆ ನನ್ನನ್ನೂ ಸಂತೈಸಿದ್ದಾರೆ, ಇಂಥವರನ್ನು ಗೌರವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಹಿತ್ತೆ ಯೆವ್ನ್ ಮಾಜೊ ಮನ್ ಹಗ್ಗುರ್ ಕರ್‍ಲ್ಯಾನಾತ್ ಮನುಕ್ ಅಡ್ಡಿ ನಾ. ಅಸ್ಲ್ಯಾ ಭಾವಾಕ್ನಿ ಮಾನುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:18
14 ತಿಳಿವುಗಳ ಹೋಲಿಕೆ  

ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.


ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.


ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ.


ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ.


ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.


ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.


ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.


ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು