19 ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.
19 ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
19 ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
19 ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.
ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.
ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.
ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.
ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.