Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:9 - ಪರಿಶುದ್ದ ಬೈಬಲ್‌

9 ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ಲೈ ಬರೆ ಕರುನ್ ಕಾಮ್ ಕರ್‍ತಲೊ ಮೊಟೊ ಎಕ್ ಅವ್ಕಾಸ್ ಮಾಕಾ ಥೈ ಗಾವಲ್ಲೊ ಹಾಯ್; ಜಾಲ್ಯಾರ್‍ಬಿ ಹ್ಯಾ ಕಾಮಾಕ್ ವಿರೊದ್ ಕರ್‍ತಲೆ ಕಮಿ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:9
10 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು