1 ಕೊರಿಂಥದವರಿಗೆ 2:4 - ಪರಿಶುದ್ದ ಬೈಬಲ್4 ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194-5 ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮಾಜೆ ಶಿಕಾಪ್ ಹೊಂವ್ದಿತ್ ಅನಿ ಮಾಜಿ ಬಾತ್ಮಿ ಬರಿ ಗೊಸ್ಟಿಯಾಂಚ್ಯಾ ಮಾನ್ಸಾಚ್ಯಾ ಶಾನ್‍ಪಾನಾಕ್ ಬರೆ ದಿಸಿ ಸಾರ್ಕೆ ನತ್ತೆ , ಖರೆ ಪವಿತ್ರ್ ಆತ್ಮ್ಯಾಚ್ಯಾ ಬಳಾಚಿ ಸಾಕ್ಷಿ ಹೊವ್ನ್ ಹೊತ್ತೆ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.