Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:5 - ಪರಿಶುದ್ದ ಬೈಬಲ್‌

5 ನಿಮ್ಮ ನಂಬಿಕೆಯು ಮನುಷ್ಯನ ಜ್ಞಾನದ ಮೇಲೆ ಆಧಾರಗೊಂಡಿರದೆ ದೇವರ ಶಕ್ತಿಯ ಮೇಲೆ ಆಧಾರಗೊಂಡಿರಬೇಕೆಂದು ನಾನು ಹೀಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ, ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚೆಸಾಟ್ನಿ ತುಮ್ಚೊ ವಿಶ್ವಾಸ್ ಮಾನ್ಸಾಚ್ಯಾ ಶಾನ್‍ಪಾನ್ ವರ್‍ತಿ ಠೆಕುನ್ ರ್‍ಹಾವ್ಚೆ ನ್ಹಯ್ ದೆವಾಚ್ಯಾ ಬಳಾ ವರ್‍ತಿ ಠೆಕುನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:5
6 ತಿಳಿವುಗಳ ಹೋಲಿಕೆ  

ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.


ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು