1 ಕೊರಿಂಥದವರಿಗೆ 2:8 - ಪರಿಶುದ್ದ ಬೈಬಲ್8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹ್ಯಾ ಕಾಲಾಚ್ಯಾ ಖಲ್ಯಾಬಿ ಅದಿಕಾರ್‍ಯಾಕ್ನಿ ಹೆಚ್ಯಾ ವಿಶಯಾತ್ ಕಳುಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಹೆ ಕಳಲ್ಲೆ ರ್‍ಹಾಲ್ಯಾರ್ ತೆನಿ ಮಹಿಮೆಚ್ಯಾ ಧನಿಯಾಕ್ ಕುರ್ಸಾರ್ ಮಾರಿನಸಿ ಹೊತ್ತೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!