1 ಕೊರಿಂಥದವರಿಗೆ 3:10 - ಪರಿಶುದ್ದ ಬೈಬಲ್10 ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ದೆವಾನ್ ಮಾಕಾ ದಿಲ್ಲ್ಯಾ ಕುರ್ಪೆಚ್ಯಾ ವೈನಾ, ಮಿಯಾ ಎಕ್ ಶಾನ್ಯಾ ಭಾಂದ್ಪ್ಯಾಚ್ಯಾ ಸಾರ್ಕೆ ಪಾಯಾ ಘಾಟ್ಲಾ ಅನಿ ತೆಚ್ಯಾ ವೈರ್ ದುಸ್ರೊ ಎಕ್ಲೊ ಘರ್ ಭಾಂದುಲ್ಲಾ, ಖರೆ ಹರಿ ಎಕ್ಲೊ ಅಪ್ನಿ ಕಶೆ ಭಾಂದುಲ್ಲಾ ತೆಚ್ಯಾ ವಿಶಯಾತ್ ಕಾಳ್ಜಿ ಘೆವ್ದಿತ್. ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.