Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:11 - ಪರಿಶುದ್ದ ಬೈಬಲ್‌

11 ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ ಘಾಟಲ್ಲ್ಯಾ ಪಾಯಾಚ್ಯಾ ಸಿವಾಯ್ ದುಸ್ರೊ ಪಾಯಾ ಕೊನ್‍ಬಿ ಘಾಲುಕ್ ಹೊಯ್ನಾ, ಜೆಜು ಕ್ರಿಸ್ತುಚ್ ತೊ ಪಾಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:11
11 ತಿಳಿವುಗಳ ಹೋಲಿಕೆ  

ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.


ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು