1 ಕೊರಿಂಥದವರಿಗೆ 3:12 - ಪರಿಶುದ್ದ ಬೈಬಲ್12 ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ರತ್ನ ಕಟ್ಟಿಗೆ ಹುಲ್ಲು ಆಪು ಮುಂತಾದವುಗಳಲ್ಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಉಲ್ಲೆ ಜಾನಾ ಸೊನೆ, ನಾ ಹೊಲ್ಯಾರ್ ಚಾಂದಿ, ನಾ ಹೊಲ್ಯಾರ್ ಲೈ ಕಿಮ್ತಿಚೆ ಗುಂಡೆ ಹ್ಯಾ ಪಾಯಾಚ್ಯಾ ವೈರ್ ಭಾಂದಾಪ್ ಭಾಂದುಕ್ ವಾಪರ್ತಾತ್ ಅನಿ ಉಲ್ಲೆ ಜಾನಾ ನಾಕುಡ್, ನಾ ಜಾಲ್ಯಾರ್ ಗವಾತ್, ನಾ ಜಾಲ್ಯಾರ್ ಬಾರಿಕ್ ಝಾಡ್ ವಾಪರ್ತಾತ್. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.