Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:14 - ಪರಿಶುದ್ದ ಬೈಬಲ್‌

14 ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಸಂಬಳ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಖಲೆ ಪಾಯಾಚ್ಯಾ ವರ್‍ತಿ ಭಾಂದಲ್ಲೆ ರ್‍ಹಾತಾ ತೆ ಘಟ್ ರ್‍ಹಾತಾ ಅನಿ ತೆ ಭಾಂದಲ್ಲ್ಯಾಕ್ ಮಜುರಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:14
12 ತಿಳಿವುಗಳ ಹೋಲಿಕೆ  

ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.


ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು