Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:18 - ಪರಿಶುದ್ದ ಬೈಬಲ್‌

18 ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮಿ ತುಮ್ಕಾಚ್ ಮೊಸ್ ಕರುನ್ ಘೆವ್‍ನಕಾಶಿ, ತುಮ್ಚ್ಯಾತ್ಲೊ ಕೊನ್ ತರಿ ಎಕ್ಲೊ ಹ್ಯಾ ಜಗಾಚ್ಯಾ ಪರ್‍ಕಾರ್ ಅಪ್ನಿ ಶಾನೊ ಮನುನ್ ಚಿಂತಾ ಜಾಲ್ಯಾರ್ , ಖರೆಚ್ ಶಾನೊ ಹೊವಸಾಟ್ನಿ ತೆನಿ ಬುದ್ದ್ ನಸಲ್ಲ್ಯಾ ಸಾರ್ಕೊ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:18
29 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.


ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.


ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ಹೀಗಿರಲು, ನನ್ನ ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಮರೆಯಬೇಡ.


ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು