1 ಕೊರಿಂಥದವರಿಗೆ 4:10 - ಪರಿಶುದ್ದ ಬೈಬಲ್10 ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮಿ ಕ್ರಿಸ್ತಾಸಾಟ್ನಿ ಪಿಶೆ, ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಶಾನೆ! ಅಮಿ ಬಳ್ ನಸಲ್ಲ್ಯಾ ಸಾರ್ಕೆ, ಖರೆ ತುಮಿ ತಾಕ್ತಿಚೆ! ತುಮ್ಕಾ ಮಾನ್ ಗಾವ್ತಾ, ಅಮ್ಕಾ ಅವ್ಮಾನ್ ಗಾವ್ತಾ! ಅಧ್ಯಾಯವನ್ನು ನೋಡಿ |
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”