Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:13 - ಪರಿಶುದ್ದ ಬೈಬಲ್‌

13 ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಪಕೀರ್ತಿ ಹೊಂದಿ ಸಮಾಧಾನವಾಗುತ್ತೇವೆ. ನಾವು ಈಗಿನ ವರೆಗೂ ಭೂಮಿಯ ಕಸವೋ ವಿಶ್ವದ ಹೊಲಸೋ ಎಂಬಂತೆ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ನಿಂದಾ ಕರಲ್ಲ್ಯಾ ಎಳಾರ್ ಅಮಿ ಸಮಾಧಾನಾನ್ ಜಬಾಬ್ ದಿತಾಂವ್. ಅಮಿ ಖರೆಚ್ ಆಜ್ ಪತರ್ ಜಗಾಚೊ ಕಚ್ರೊ ಅನಿ ಸಗ್ಳ್ಯಾನಿ ಭಾಯ್ರ್ ಕಾಡುನ್ ಟಾಕಲ್ಲೆ ಮಟ್ಲ್ಯಾ ಸಾರ್ಕೆ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:13
4 ತಿಳಿವುಗಳ ಹೋಲಿಕೆ  

ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ.


ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು