Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:17 - ಪರಿಶುದ್ದ ಬೈಬಲ್‌

17 ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹ್ಯಾಚ್ ಕಾರನಾಸಾಟ್ನಿ ಮಿಯಾ ತಿಮೊತಿಕ್ ತುಮ್ಚ್ಯಾ ಕಡೆ ಧಾಡ್ಲಾ, ತೊ ಧನಿಯಾತ್ ಮಾಜೊ ಪ್ರೆಮಾಚೊ ಅನಿ ವಿಶ್ವಾಸಾಚೊ ಲೆಕ್ ಸಾರ್ಕೊ ಹಾಯ್, ಜೆಜು ಕ್ರಿಸ್ತಾತ್ ಮಿಯಾ ಚಲುನ್ ಹಾಂವ್ ಅನಿ ಸಗ್ಳ್ಯಾಕ್ಡೆ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ನಿ ಮಿಯಾ ಶಿಕ್ವುನ್, ದಾಕ್ವುತಾ ತಿ ವಾಟ್ ತೊ ತುಮ್ಕಾ ಯಾದ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:17
33 ತಿಳಿವುಗಳ ಹೋಲಿಕೆ  

ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.


ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.


ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.


ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.


ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.


ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.


ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.


ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.


ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.


ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.


ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.


ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.


ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು