1 ಕೊರಿಂಥದವರಿಗೆ 4:2 - ಪರಿಶುದ್ದ ಬೈಬಲ್2 ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅಸ್ಲ್ಯಾ ಸೆವಾಕಾಕ್ನಿ ಎಕ್ ಎವ್ಡೆಚ್ ರ್‍ಹಾವ್ಕ್ ಪಾಜೆ ತೆ ಕಾಯ್ ಮಟ್ಲ್ಯಾರ್, ಅಪ್ನಾಚ್ಯಾ ಯಜಮಾನಾಕ್ ವಿಶ್ವಾಸಾನ್ ರ್‍ಹಾತಲೆ. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.