Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:3 - ಪರಿಶುದ್ದ ಬೈಬಲ್‌

3 ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗಾದರೋ ನಿವ್ಮಿುಂದಾಗಲಿ ಮನುಷ್ಯರು ನೇವಿುಸುವ ದಿನದಲ್ಲಾಗುವ ನ್ಯಾಯ ಸಭೆಯಿಂದಾಗಲಿ ವಿಚಾರಣೆಯಾಗುವದು ಅತ್ಯಲ್ಪ ಕಾರ್ಯವಾಗಿದೆ; ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜ್ಯಾ ವಿಶಯಾತ್ ಸಾಂಗುಚೆ ಜಾಲ್ಯಾರ್ ಮಿಯಾ ತುಮಿ ಕರ್‍ತಲ್ಯಾ ಝಡ್ತಿಚಿ ಹೊಂವ್ದಿತ್, ಮಾನ್ಸಾಂಚ್ಯಾ ಕಸ್ಲ್ಯಾಬಿ ನ್ಯಾಯ್ ನಿರ್ನಯ್ ಕರ್‍ತಲ್ಯಾ ತಾಂಡ್ಯಾಂಚ್ಯಾ ನಿರ್ನಯಾಚಿ ಹೊಂವ್ದಿತ್, ಮಿಯಾ ಪರ್ವಾ ಕರಿನಾ, ಮಾಜಿಚ್ ಸೈತ್ ಮಿಯಾ ಝಡ್ತಿ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:3
6 ತಿಳಿವುಗಳ ಹೋಲಿಕೆ  

ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.


ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು