Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:6 - ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:6
35 ತಿಳಿವುಗಳ ಹೋಲಿಕೆ  

ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.


ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.


ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.


ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.


ತಾವು ಬಹಳ ಪ್ರಾಮುಖ್ಯವಾದವರೆಂದು ಯೋಚಿಸುವ ಆ ಜನರ ಗುಂಪಿನೊಡನೆ ಸೇರಿಕೊಳ್ಳಲು ನಮಗೆ ಧೈರ್ಯಸಾಲದು. ನಾವು ನಮ್ಮನ್ನು ಅವರೊಂದಿಗೆ ಹೋಲಿಸಿಕೊಳ್ಳುವುದಿಲ್ಲ. ಅವರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುತ್ತಾರೆ; ತಮ್ಮನ್ನು ತಾವೇ ಮೌಲ್ಯಮಾಪನ ಮಾಡಿಕೊಳ್ಳುತ್ತಾರೆ. ಅವರಿಗೆ ಏನೂ ಗೊತ್ತಿಲ್ಲವೆಂದು ಇದೇ ತೋರಿಸುತ್ತದೆ.


ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.


ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.


ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.


ಆದ್ದರಿಂದ ನೀವು ಜನರ ಬಗ್ಗೆ ಹೆಚ್ಚಳಪಡಬಾರದು. ಸಮಸ್ತವೂ ನಿಮ್ಮದೇ.


ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, “ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”


ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.


ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.


ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?


ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು.


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು