Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:7 - ಪರಿಶುದ್ದ ಬೈಬಲ್‌

7 ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದುಸ್ರ್ಯಾಂಚ್ಯಾನ್ಕಿ ತಿಯಾ ಮೊಟೊ ಮನುನ್ ತುಕಾ ಕೊನ್ ಸಾಂಗ್ಲಾ? ತುಜಾಕ್ಡೆ ತಿಯಾ ಘೆಯ್‍ ನಸಲ್ಲೆ ತುಜೆಚ್ ಮಟಲ್ಲೆ ಕಾಯ್ ಹಾಯ್? ಅನಿ ತಿಯಾ ತೆ ದುಸ್ರ್ಯಾಕ್ನಾ ಘೆಟ್ಲೆಯ್ ಹೊಲ್ಯಾರ್ ತೆ ತುಜೆಚ್ ಸಾರ್ಕೆ ತಿಯಾ ಕಶ್ಯಾಕ್ ಬಡಾಯ್ ಬೊಲ್ತೆಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:7
29 ತಿಳಿವುಗಳ ಹೋಲಿಕೆ  

ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು