1 ಕೊರಿಂಥದವರಿಗೆ 4:8 - ಪರಿಶುದ್ದ ಬೈಬಲ್8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಎವ್ಡ್ಯಾತುಚ್ ತುಮಿ ತೃಪ್ತಿ ಹಾಸಿ ದಿಸ್ತಾ, ತುಮಿ ಸಾವ್ಕಾರ್ ಹಾಸಿ, ಅಮಿ ನಸ್ತಾನಾಚ್ ತುಮಿ ಖರೆಚ್ ರಾಜಾ ಹೊಲ್ಲೆ ರ್‍ಹಾಲ್ಯಾರ್ ಕವ್ಡೆ ಬರೆ ಹೊತ್ತೆ! ಅಮಿಬಿ ತುಮ್ಚ್ಯಾ ವಾಂಗ್ಡಾ ರಾಜ್ ಚಾಲ್ವುನ್ಗೆತ್ ರ್‍ಹಾಯ್ ಹೊತ್ತಾಂವ್! ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.