Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:1 - ಪರಿಶುದ್ದ ಬೈಬಲ್‌

1 ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ವೆಭಿಚಾರ್ ಚಾಲು ಹೊಲಾ ಮನುನ್ ಮಾಜ್ಯಾ ಕಾನಾತ್ ಪಡ್ಲಾ; ತಸ್ಲೊ ವೆಭಿಚಾರ್ ವಿಶ್ವಾಸಾತ್ ನಸಲ್ಲ್ಯಾ ಲೊಕಾತ್ನಿ ಸೈತ್ ಗಾವಿ ಸರ್ಕೊ ನಾ; ಎಕ್ಲೊ ಅಪ್ನಾಚ್ಯಾ ಬಾಬಾಚ್ಯಾ ದೊನ್ವೆಚ್ಯಾ ಬಾಯ್ಕೊಚ್ಯಾ ವಾಂಗ್ಡಾ ನಿಜ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:1
32 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.


ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.


ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ,


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.


ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


“ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


“ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.


ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.


ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.


“ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.”


ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ.


ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.


ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.


ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ.


ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.


ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”


ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ನಿಮ್ಮ ಸಭೆಯ ಒಬ್ಬನು ದುಃಖವನ್ನು ಉಂಟುಮಾಡಿದ್ದು ನನಗಲ್ಲ. ಒಂದಲ್ಲ ಒಂದು ರೀತಿಯಲ್ಲಿ ಅವನು ನಿಮ್ಮೊಲ್ಲರಿಗೂ ದುಃಖವನ್ನು ಉಂಟುಮಾಡಿದ್ದಾನೆ. (ಅದು ತನ್ನ ವಾಸ್ತವ ಸ್ಥಿತಿಗಿಂತ ಹೆಚ್ಚು ಕೆಟ್ಟದ್ದಾಗಿ ಕಾಣುವಂತೆ ಮಾಡಲು ನನಗೆ ಇಷ್ಟವಿಲ್ಲ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು