Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:8 - ಪರಿಶುದ್ದ ಬೈಬಲ್‌

8 ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಮನುನ್ ಜುನ್ನ್ಯಾ ಸೊಡ್ಯಾಕ್ ಮಟ್ಲ್ಯಾರ್ ವಾಯ್ಟ್ ಅನಿ ಖೊಟ್ಯಾ ಪಾನಾಚ್ಯಾ ಸೊಡ್ಯಾಕ್ ನ್ಹಯ್ ತೆಚ್ಯಾ ಬದ್ಲಾಕ್ ನಿತಳ್ ಅನಿ ಖರ್ಯಾಚ್ಯಾ ಪುಗ್ ನಸಲ್ಲ್ಯಾ ಭಾಕ್ರಿಚೊ ಸನ್ ಆಚರನ್ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:8
34 ತಿಳಿವುಗಳ ಹೋಲಿಕೆ  

ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.


ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.


ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


“ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.


ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.


“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.


ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.


ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು