1 ಕೊರಿಂಥದವರಿಗೆ 6:11 - ಪರಿಶುದ್ದ ಬೈಬಲ್11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತುಮ್ಚ್ಯಾತ್ಲೆ ಉಲ್ಲೆ ಎಕ್ ಕಾಲಾತ್ ತಸೆಚ್ ಹೊತ್ತೆ; ಖರೆ ಅತ್ತಾ ತುಮ್ಕಾ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ನಾಂವಾನ್ ಅನಿ ದೆವಾಚ್ಯಾ ಆತ್ಮ್ಯಾನ್ ಧುವ್ನ್ ಪವಿತ್ರ್ ಕರಲ್ಲೆ ಹಾಯ್, ಅಶೆ ಪವಿತ್ರ್ ಅನಿ ನಿತಿವಂತ್ ಲೊಕಾ ಕರಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.