1 ಕೊರಿಂಥದವರಿಗೆ 6:18 - ಪರಿಶುದ್ದ ಬೈಬಲ್18 ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ, ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರಗಾಗಿವೆ, ಆದರೆ ಜಾರತ್ವ ಮಾಡುವವನು ತನ್ನ ದೇಹಕ್ಕೆ ಹಾನಿಕರವಾದ ಪಾಪವನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಹೊಲ್ಯಾರ್ ಅನೈತಿಕ್ ಸಮಂದಾಕ್ನಾ ಧುರ್ ಪಳಾ, ಮಾನುಸ್ ಕರ್‍ತಲಿ ಸಗ್ಳಿ ಪಾಪಾ ತೊ ಆಂಗಾಚ್ಯಾ ಭಾಯ್ರ್ ಕರ್‍ತಾ ಖರೆ ಅನೈತಿಕ್ ಪಾಪ್ ತೊ ಅಪ್ನಾಚ್ಯಾ ಆಂಗಾಚ್ಯಾ ವಿರೊದ್ ಕರ್‍ತಾ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.