1 ಕೊರಿಂಥದವರಿಗೆ 6:2 - ಪರಿಶುದ್ದ ಬೈಬಲ್2 ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾಚಿ ಲೊಕಾ ಜಗಾಚಿ ಝಡ್ತಿ ಕರ್ತಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮಿ ಜರ್ ಹ್ಯಾ ಜಗಾಚಿ ಝಡ್ತಿ ಕರ್‍ತಲೆ ತರ್ ಹ್ಯಾ ಚಿಲ್ಲರ್ ವಿಶಯಾಂಚೆ ನಿರ್ನಯ್ ಕರುಕ್ ತುಮ್ಚ್ಯಾನ್ ಹೊಯ್ನಾ ಕಾಯ್? ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.