1 ಕೊರಿಂಥದವರಿಗೆ 6:20 - ಪರಿಶುದ್ದ ಬೈಬಲ್20 ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮೊಟಿ ಕಿಮ್ಮತ್ ದಿವ್ನ್ ತುಮ್ಕಾ ಇಕಾತ್ ಘೆಟಲ್ಲೆ ಹಾಯ್, ತಸೆ ಮನುನ್ ತುಮ್ಚ್ಯಾ ಆಂಗಾನ್ ತುಮಿ ದೆವಾಕ್ ಮಹಿಮಾ ದಿವಾ. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.