Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:7 - ಪರಿಶುದ್ದ ಬೈಬಲ್‌

7 ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕಿಂತ ಅನ್ಯಾಯವನ್ನು ಯಾಕೆ ಸಹಿಸಬಾರದು? ಆಸ್ತಿಯ ನಷ್ಟವನ್ನು ಯಾಕೆ ತಾಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುಕ್ ಜಾತಲೆ ಝಗ್ಡೆ ಹಾತ್ ಮಟ್ಲ್ಯಾರುಚ್ ಎಕ್ ವಾಟೆನ್ ತುಮಿ ಹಾರಲ್ಲ್ಯಾ ಸಾರ್ಕೆ, ಅಶೆ ರ್‍ಹಾತಾನಾ ಅನ್ನ್ಯಾಯ್ ಸೊಸುನ್ ಘೆವ್ಕ್, ನಾ ಹೊಲ್ಯಾರ್ ಅಪ್ನಾಕುಚ್ ಲುಕ್ಷಾನ್ ಸೊಸುಕ್ ತುಮಿ ತಯಾರ್ ನಾಶಿ ಕಶ್ಯಾಕ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:7
12 ತಿಳಿವುಗಳ ಹೋಲಿಕೆ  

“ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.


ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.


ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು