11 ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.
ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
“ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.