17 ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.
17 ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
17 ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.
ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.
ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.
ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.
ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.
ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.