1 ಕೊರಿಂಥದವರಿಗೆ 7:25 - ಪರಿಶುದ್ದ ಬೈಬಲ್25 ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕನ್ನಿಕೆಯರನ್ನು ಕುರಿತು ಕರ್ತನಿಂದ ಬಂದ ಆಜ್ಞೆ ನನಗೆ ಯಾವದೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಲಗಿನ್ ಹೊಯ್ನಸಲ್ಲ್ಯಾಂಚ್ಯಾ ವಿಶಯಾತ್ ಸಾಂಗುಚೆ ಜಾಲ್ಯಾರ್, ತೆಂಚ್ಯಾ ವಿಶಯಾತ್ ಧನಿಯಾಕ್ನಾ ಮಾಕಾ ಕಸ್ಲೊಬಿ ಖಾಯ್ದೊ ಗಾವುಕ್ ನಾ. ಖರೆ ಮಾಕಾ ಧನಿಯಾಚಿ ದಯಾ ಗಾವಲ್ಲ್ಯಾ ವೈನಾ ಮಿಯಾ ವಿಶ್ವಾಸಾಕ್ ಯೊಗ್ಯ್ ಮನುನ್ ಚಿಂತುನ್. ಮಾಜೊ ಅಭಿಪ್ರಾಯ್ ಮಿಯಾ ಸಾಂಗ್ತಾ. ಅಧ್ಯಾಯವನ್ನು ನೋಡಿ |
ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.