Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:28 - ಪರಿಶುದ್ದ ಬೈಬಲ್‌

28 ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಾಲ್ಯಾರ್ಬಿ ತಿಯಾ ಲಗಿನ್ ಕರುನ್ ಘೆತಲ್ಯಾತ್ ಕಾಯ್ ಪಾಪ್ ನಾ; ಖರೆ ಲಗಿನ್ ಹೊಲ್ಲ್ಯಾಕ್ನಿ ಹ್ಯಾ ಬಾಳ್ವಿಚೆ ಸದ್ದಿಚೆ ಕಸ್ಟ್ ಹಾತ್. ತೆ ಕಸ್ಟ್ ತುಮ್ಕಾ ಗಾವ್ತಲೆ ನಕ್ಕೊ ಮನ್ತಲಿ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:28
7 ತಿಳಿವುಗಳ ಹೋಲಿಕೆ  

ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.


ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ.


ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು