Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:29 - ಪರಿಶುದ್ದ ಬೈಬಲ್‌

29 ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗುಕ್ ಬಗ್ತಲೆ ಎವ್ಡೆಚ್ ಠರವಲ್ಲೊ ಎಳ್ ಬಾರಿಕ್ ಹೊವ್ನಗೆತ್ ಯೆಲೊ, ತಸೆ ಮನುನ್ ಹಿತ್ನಾ ಫಿಡೆ ಬಾಯ್ಕೊ ಹೊತ್ತ್ಯಾನಿ ಬಾಯ್ಕೊ ನಸಲ್ಲ್ಯಾ ಸಾರ್ಕೆ ಚಲುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:29
23 ತಿಳಿವುಗಳ ಹೋಲಿಕೆ  

ಈ ಲೋಕವು ಮತ್ತು ಜನರು ಬಯಸುವಂಥವುಗಳು ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತಕ್ಕನುಸಾರವಾಗಿ ಮಾಡುವವನು ಸದಾಕಾಲ ಜೀವಿಸುವನು.


ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.


ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.


ಆದರೆ ಬರ್ಜಿಲ್ಲೈಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನಿನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ?


ಮೂರನೆಯವನು, ‘ನಾನು ಇದೀಗ ಮದುವೆಯಾಗಿದ್ದೇನೆ, ನಾನು ಬರಲಾರೆ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು