Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:3 - ಪರಿಶುದ್ದ ಬೈಬಲ್‌

3 ಗಂಡನು ತನ್ನ ಹೆಂಡತಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಮತ್ತು ಹೆಂಡತಿಯು ತನ್ನ ಗಂಡನಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪತಿಯಾದವನು ತನ್ನ ಸತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ. ಅಂತೆಯೇ, ಸತಿಯಾದವಳು ತನ್ನ ಪತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಘೊವಾನ್ ಬಾಯ್ಕೊಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ಅನಿ ಬಾಯ್ಕೊನ್ ಘವಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ತೆನಿ ದೊಗೆಬಿ ಎಕಾಮೆಕಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ನ್ ತೃಪ್ತಿ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:3
4 ತಿಳಿವುಗಳ ಹೋಲಿಕೆ  

ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.


“ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.


ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.


ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು