Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:40 - ಪರಿಶುದ್ದ ಬೈಬಲ್‌

40 ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ತಿ ಘೊವ್ ಮರಲ್ಲಿ ಅನಿ ಎಕ್ ಘವ್ ನಸ್ತಾನಾಚ್ ರ್‍ಹಾಲ್ಯಾರ್, ತಿಚೆ ಲೈ ಬರೆ ಮನುನ್ ಮಾಜೊ ಅಭಿಪ್ರಾಯ್ ಅನಿ ಮಾಜ್ಯಾ ಭುತ್ತುರ್ ದೆವಾಚೊ ಪ್ರೆರನ್ ದಿತಲೊ ಆತ್ಮೊ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:40
13 ತಿಳಿವುಗಳ ಹೋಲಿಕೆ  

ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.


ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.


ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ.


ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.


ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು