Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:6 - ಪರಿಶುದ್ದ ಬೈಬಲ್‌

6 ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದು ನನ್ನ ಆಜ್ಞೆಯಲ್ಲ, ಅನುಮತಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ಮಾಡಬಹುದೆಂದು ಹೇಳುವದು ಹಿತೋಪದೇಶವೇ ಹೊರತು ಆಜ್ಞೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಸಗ್ಳೆ ತುಮ್ಕಾ ಹುಕುಮ್ ದಿವ್ನ್ ನ್ಹಯ್ ಖರೆ ಅನುಮತಿ ಮನುನ್ ಮಿಯಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:6
6 ತಿಳಿವುಗಳ ಹೋಲಿಕೆ  

ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.


ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.


ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.


ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ.


ಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು.


ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು