ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.
ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.