1 ಕೊರಿಂಥದವರಿಗೆ 8:13 - ಪರಿಶುದ್ದ ಬೈಬಲ್13 ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತಸೆಮನುನ್ ಖಾನ್ ಮಾಜ್ಯಾ ಭಾವಾಕ್ ಪಾಪಾತ್ ಪಡುಕ್ ಕಾರನ್ ಹೊತಾ ಹೊಲ್ಯಾರ್ ಮಿಯಾ ಕನ್ನಾಚ್ ಮಾಸ್ ಖಾಯ್ನಾ, ಕಶ್ಯಾಕ್ ಮಟ್ಲ್ಯಾರ್ ಮಾಜೊ ಭಾವ್ ಪಾಪಾತ್ ಪಡ್ತಲೆ ಮಾಕಾ ನಕ್ಕೊ. ಅಧ್ಯಾಯವನ್ನು ನೋಡಿ |
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.