1 ಕೊರಿಂಥದವರಿಗೆ 8:3 - ಪರಿಶುದ್ದ ಬೈಬಲ್3 ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ಜೆ ಕೊನ್ ದೆವಾಚೊ ಪ್ರೆಮ್ ಕರ್‍ತಾ ತೆಕಾ ದೆವ್ ವಳಕ್ತಾ. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.