1 ಕೊರಿಂಥದವರಿಗೆ 8:4 - ಪರಿಶುದ್ದ ಬೈಬಲ್4 ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆ ಹೊಲ್ಯಾರ್ ಮುರ್ತಿಯಾಕ್ನಿ ಭೆಟ್ವಲ್ಲೆ ಕೊನ್ಬಿ ಖಾವ್ಕ್ ಹೊತಾ ಕಾಯ್? “ಮುರ್ತಿ ಮನ್ತಲೆ ತೆ ಕಾಯ್ಬಿ ನ್ಹಯ್ ಅನಿ ಎಕ್ ದೆವಾ ಶಿವಾಯ್ ದುಸ್ರೊ ದೆವ್ ನಾ ಮನುನ್ ಅಮ್ಕಾ ಗೊತ್ತ್ ಹಾಯ್”. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.