1 ಕೊರಿಂಥದವರಿಗೆ 9:24 - ಪರಿಶುದ್ದ ಬೈಬಲ್24 ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಎಕ್ ಖೆಳಾಚ್ಯಾ ಜಾಗ್ಯಾರ್ ಪಳುಕ್ ಹೊತಲೆ ಸಗ್ಳೆ ಜಾನಾ ಪಳ್ತಾತ್ ತೆ ಖರೆ, ತ್ಯಾತುರ್ ಎಕ್ಲ್ಯಾಕ್ ತವ್ಡೆಚ್ ಭೊಮಾನ್ ಗಾವ್ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? ತರ್ ಭೊಮಾನ್ ಗಾಯ್ ಸಾರ್ಕೆ ತುಮಿಬಿ ಪಳಾ. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.