Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:6 - ಪರಿಶುದ್ದ ಬೈಬಲ್‌

6 ಬಾರ್ನಬನು ಮತ್ತು ನಾನು ಮಾತ್ರ ನಮ್ಮ ಜೀವನಕ್ಕೆ ಬೇಕಾದದ್ದನ್ನು ದುಡಿದು ಸಂಪಾದಿಸಿಕೊಳ್ಳಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಥವಾ, ಕೈಕೆಲಸವನ್ನು ಮಾಡದೆ ಜೀವಿಸುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಹಕ್ಕಿಲ್ಲವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ನಾ ಹೊಲ್ಯಾರ್ ಬಾರ್ನಾಬಾಸಾಕ್ ಅನಿ ಮಾಕಾ ಎವ್ಡೆಚ್ ಕಾಮಾ ಕರುನ್ ಜಿವನ್ ಸಾರುಚೆ ಮನುನ್ ಹುಕುಮ್ ದಿಲ್ಲೊ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:6
15 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ಜನರು ಬಾರ್ನಬನನ್ನು “ಜೆಯುಸ್” ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” ದೇವರೆಂದೂ ಕರೆದರು.


ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.


ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.


ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.


“ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು