Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:15 - ಪರಿಶುದ್ದ ಬೈಬಲ್‌

15 ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜು ಕ್ರಿಸ್ತ್ ಹ್ಯಾ ಜಗಾತ್ ಪಾಪಿ ಲೊಕಾಕ್ನಿ ಬಚಾವ್ ಕರುಕ್ ಮನುನ್ ಯೆಲ್ಲೊ ಮನ್ತಲಿ ಗೊಸ್ಟ್ ಖರಿ ಅನಿ ಹೆ ಸಗ್ಳ್ಯಾ ರಿತಿನ್ ವಿಶ್ವಾಸ್ ಕರುಕುಚ್ ಪಾಜೆ: ಸಗ್ಳ್ಯಾಂಚ್ಯಾನಿಕಿ ಬುರ್ಸೊ ಪಾಪಿ ಮಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:15
41 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.


ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು.


ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ.


ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)


ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು