1 ತಿಮೊಥೆಯನಿಗೆ 1:17 - ಪರಿಶುದ್ದ ಬೈಬಲ್17 ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅತ್ತಾ ತ್ಯಾ ನಿರಂತರ್ ರಾಜ್ವಟ್ ಕರ್ತಲ್ಯಾ ರಾಜಾಕ್, ಕನ್ನಾಚ್ ನಾಸ್ ಹೊಯ್ನಸಲ್ಲ್ಯಾ ಅನಿ ದಿಸ್ಟಿಕ್ ದಿಸಿನಸಲ್ಲ್ಯಾ ಎಕ್ಲ್ಯಾಚ್ ದೆವಾಕ್ ಮಹಿಮಾ ಅನಿ ಮಾನ್ ಹೊಂವ್ದಿತ್ ಸದಾ ಸರ್ವತಾಕ್ ಆಮೆನ್! ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.