1 ತಿಮೊಥೆಯನಿಗೆ 1:3 - ಪರಿಶುದ್ದ ಬೈಬಲ್3 ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಮೆಸಿದೊನಿಯಾಕ್ ಜಾತಾನಾ ತಿಯಾ ಎಫೆಜಾತುಚ್ ರ್‍ಹಾ ಮನುನ್ ಮಿಯಾ ತುಕಾ ಮಾಗುನ್ ಘೆಟಲ್ಲೊ, ಉಲ್ಲಿ ಲೊಕಾ ಥೈ ಚುಕ್ ಶಿಕಾಪಾ ಲೊಕಾಕ್ನಿ ಶಿಕ್ವುಲ್ಯಾತ್ ತೆಂಕಾ ತೆ ಶಿಕಾಪ್ ಬಂದ್ ಕರಾ ಮನುನ್ ತಿಯಾ ಹುಕುಮ್ ದಿ. ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.