1 ತಿಮೊಥೆಯನಿಗೆ 1:5 - ಪರಿಶುದ್ದ ಬೈಬಲ್5 ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ಕರಾರಾಚ್ಯಾ ನೆಮಾಚೊ ಉದ್ದೆಶ್ ಪ್ರೆಮ್ ಹೊವ್ನ್ ಹಾಯ್. ಹೆ, ಎಕ್ ಪವಿತ್ರ್ ಭುತ್ತುರ್‍ಲ್ಯಾ ಮನಾಕ್, ಬರಿ ಬುದ್ದ್ ಅನಿ ವಿಶ್ವಾಸ್ ಯೆತಾ. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.