9 ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,
9-10 ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.
9 ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.
ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.
ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.
ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.
ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.
ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.
ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.
“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ.
ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.
ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.
ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.
ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.
ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;
ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.
ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”