1 ತಿಮೊಥೆಯನಿಗೆ 2:2 - ಪರಿಶುದ್ದ ಬೈಬಲ್2 ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಸಗ್ಳ್ಯಾ ರಿತಿನ್ ದೆವಾಕ್ ಬರೆ ದಿಸ್ತಲೆ ಶಾಂತ್ ಅನಿ ಸಮಾದಾನಾಚೆ ಜಿವನ್ ಕರುಕ್ ಹೊಯ್ ಸರ್ಕೆ ರಾಜಾಂಚ್ಯಾ ಅನಿ ಸಗ್ಳ್ಯಾ ಅದಿಕಾರ್‍ಯಾಂಚ್ಯಾಸಾಟ್ನಿ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”