Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:10 - ಪರಿಶುದ್ದ ಬೈಬಲ್‌

10 ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡುಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅದ್ದಿ ತೆಂಚಿ ಪರಿಕ್ಷಾ ಕರುಚೆ, ತೆನಿ ಕಸ್ಲ್ಯಾಬಿ ಚುಕೆತ್ ನಸಲೆ ಹೊಲ್ಯಾರ್ ತೆಂಕಾ ಸೆವಾ ಕರ್‍ತಲ್ಯಾ ಕಾಮಾಕ್ ನೆಮ್ಸುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:10
9 ತಿಳಿವುಗಳ ಹೋಲಿಕೆ  

ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು