Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:14 - ಪರಿಶುದ್ದ ಬೈಬಲ್‌

14 ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೇಗನೆ ನಿನ್ನ ಬಳಿಗೆ ಬರುವೆನೆಂದು ನನಗೆ ನಿರೀಕ್ಷೆಯುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹಿ ಚಿಟಿ ಲಿವಲ್ಲ್ಯಾ ಸರ್ಕೆ ಲಗ್ಗುನಾಚ್ ಯೆವ್ನ್ ಮಿಯಾ ತುಕಾ ಯೆವ್ನ್ ಭೆಟ್ತಾ ಕಾಯ್ಕಿ ಮನುನ್ ಬರೊಸೊ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:14
11 ತಿಳಿವುಗಳ ಹೋಲಿಕೆ  

ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.


ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.


ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು.


ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.


ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.


ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು.


ಹೌದು, ನಾವು ನಿಮ್ಮಲ್ಲಿಗೆ ಬರಬೇಕೆಂದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.


ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು